



ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿದಿತ್ತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿತ್ತು.
ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳು , ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಸೂಚನೆ ನೀಡಿತ್ತು
ಇದರ ಜತೆಗೆ ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.