



ಮಂಗಳೂರು: ಮಂಗಳೂರಿನ ಪ್ರತಿಷ್ಟಿತ ಜೈವಿಕ ಉದ್ಯಾನವನ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನ 9 ವರ್ಷ ಪ್ರಾಯದ ಹುಲಿ ಒಲಿವರ್ ಮಂಗಳವಾರ ಮುಂಜಾನೆಕುಸಿದು ಬಿದ್ದು ಮೃತಪಟ್ಟಿದೆ. . ಜೀವ ಉಳಿಸಲು ಮೃಗಾಲಯದ ವೈದ್ಯಾಧಿಕಾರಿಗಳು ಮಾಡಿದ ಪ್ರಯತ್ನ ಫಲಪ್ರದವಾಗಲಿಲ್ಲ. ಇದು ವಿಕ್ರಂ ಹಾಗೂ ಶಾಂಭವಿ ಹುಲಿ ಜೋಡಿಗೆ ಜನಿಸಿದ್ದ ಎರಡು ಮರಿಗಳಲ್ಲೊಂದು. ಮೃತಪಟ್ಟ ಹುಲಿಯ ಅಂಗಾಂಗಗಳ ಮಾದರಿಯನ್ನು ಬೆಂಗಳೂರಿನ ಪ್ರಾಣಿ ಆರೋಗ್ಯ ಹಾಗೂ ಪಶು ಜೈವಿಕ ಶಾಸ್ತ್ರ ಸಂಸ್ಥೆ ಹಾಗೂ ಉತ್ತರ ಪ್ರದೇಶದ ಭಾರತೀಯ ಪಶು ಸಂಶೋಧನಾ ಸಂಸ್ಥೆಗೆ ಕಳುಹಿಸಿ ಕೊಡಲಾಗಿದೆ. ಕೋವಿಡ್ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಎನಿಮಲ್ ಡಿಸೀಸಸ್‌ಗೆ ಕೂಡಾ ಕಳುಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ರೋಗ ಹರಡದಂತೆ ರೋಗ ನಿರೋಧಕ ದ್ರಾವಣವನ್ನು ಪ್ರಾಣಿಗಳ ಆವರಣದ ಸುತ್ತಮುತ್ತ ಸಿಂಪಡಿಸಲಾಗುತ್ತಿದೆ ಎಂದು ಪಿಲಿಕುಳ ಎಂದು ನಿರ್ದೇಶಕ ಜೆ.ಎಚ್ ಭಂಡಾರಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.