



ಬಾಗಲಕೋಟೆ:ಪದ್ಮಶ್ರೀ ಪುರಸ್ಕೃತರ ಇಬ್ರಾಹಿಂ ಎನ್.ಸುತಾರ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ 'ಭಾವೈಕ್ಯ ಜನಪದ ಸಂಗೀತ ಮೇಳ' ವನ್ನು ಸ್ಥಾಪಿಸಿದರು. ಕಳೆದ 44 ವರ್ಷಗಳಿಂದ ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರುತ್ತ ಬಂದಿರುತ್ತಾರೆ. ಪ್ರತಿವರ್ಷ ನೂರಾರು ಕಾರ್ಯ ಕ್ರಮಗಳನ್ನು ನೀಡುತ್ತ, ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡಗಿಸಿಕೊಂಢಿದ್ದರು.ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜ ಸೇವೆಯ ಮುಖಾಂತರ ಸರ್ವ ಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆಯ ಸಂದೇಶ ಸಾರುವುದು ವಿಶೇಷ ವಾಗಿತ್ತು.
1995 ರಲ್ಲಿ ಕರ್ನಾಟಕ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ. 2018ರಲ್ಲಿ ಭಾರತ ಸರಕಾರದಿಂದ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.