



ನವದೆಹಲಿ; ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ. ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ. ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..
ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು. ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ. ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು. ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು. ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ. ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.