



ಬೆಂಗಳೂರು: ಮಕ್ಕಳು ಪೋಷಕರ ಆರೈಕೆ ಮಾಡದಿದ್ದರೆ ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ವಿಲ್ ಅಥವಾ ದಾನಪತ್ರ ರದ್ದು ಮಾಡುವ ಅವಕಾಶವಿದೆ ಸಂತ್ರಸ್ಥ ಪೋಷಕರಿಗೆ ಇದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರ 2007ರಲ್ಲಿ ಜಾರಿಗೆ ತಂದಿರುವ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿ ಇಲ್ಲ’ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಸಚಿವರು, ‘ಈ ಕಾಯ್ದೆ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ತಿಂಗಳ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರಿಕರು ಕಾಯ್ದೆಯ ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು.
ಅಂತೆಯೇ ‘ತಂದೆ– ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರು ಸ್ಥಾಪಿಸಲು ಈ ಕಾಯ್ದೆಯಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ’ ಎಂದು ಸಚಿವರು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.