logo
WhatsApp Image 2026-04-02 at 14.46.04.jpeg
hindalco everlast.jpeg

ಪೊಲೀಸರಿಗೆ ಹೊಡೆದು ಕಳ್ಳನ ಬಿಡಿಸಿದರು!

ಟ್ರೆಂಡಿಂಗ್
share whatsappshare facebookshare telegram
9 Apr 2023
post image

ಭೋಪಾಲ್‌: ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಪೊಲೀಸ್‌ ಠಾಣೆಯೊಂದರ ಮೇಲೆ 50 ಮಂದಿಯ ಗುಂಪೊಂದು ದಾಳಿ ನಡೆಸಿ, ಠಾಣೆಯಲ್ಲಿ ಬಂಧಿತನಾಗಿದ್ದ ಓರ್ವ ಡಕಾಯಿತ ಸೇರಿಂತೆ ಮೂವರನ್ನು ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ. ನಾಲ್ವರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಠಾಣೆಗೆ ಶನಿವಾರ ಬೆಳಗ್ಗೆ 3 ಗಂಟೆ ಸಮಯಕ್ಕೆ 50 ಜನರ ಗುಂಪೊಂದು ನುಗ್ಗಿ, ಪೊಲೀಸರ ಮೇಲೆ ದಾಳಿ ನಡೆಸಿದೆ.

ಡಕಾಯಿತ ಹೇಮಾ ಮೆಗ್ವಾಲ್‌ ಸೇರಿ, ಆತನ ಜತೆಗಿದ್ದ ಇನ್ನಿಬ್ಬರು ಆರೋಪಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ. ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.