logo
WhatsApp Image 2026-04-02 at 14.46.04.jpeg
hindalco everlast.jpeg

ತ್ರಾಸಿ : ಬೈಕ್ ಗಳ ನಡುವೆ ಅಪಘಾತ: ಸವಾರನಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
7 Aug 2022
post image

ಗಂಗೊಳ್ಳಿ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರನೋರ್ವ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಕ್ಲಾಸಿಕ್ ಹಾಲ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.6ರಂದು ಮಧ್ಯಾಹ್ನ ನಡೆದಿದೆ. ಅಬ್ದುಲ್ ರಜಾಕ್ ಎಂಬವರು ಗಾಯಗೊಂಡ ಸವಾರ. ಇವರು ನಿನ್ನೆ ಮಧ್ಯಾಹ್ನ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದರು. ಈ ವೇಳೆ ಮುಳ್ಳಿಕಟ್ಟೆ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ನಿತೀಶ್ ಖಾರ್ವಿ ಎಂಬವರು ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಸವಾರಿ ಮಾಡಿಕೊಂಡು ಬಂದು ಅಬ್ದುಲ್ ರಜಾಕ್ ಅವರ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ರಜಾಕ್ ಬೈಕ್ ಸಮೇತ ರಸ್ತೆಗೆ ಬಿದ್ದು, ಗಾಯಗೊಂಡಿದ್ದರು. ಕೂಡಲೇ ಅವರನ್ನು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.