logo
WhatsApp Image 2026-04-02 at 14.46.04.jpeg
hindalco everlast.jpeg

ಸಮುದ್ರದ ಅಲೆಗೆ ಮೂವರು ಯುವಕರು ನೀರುಪಾಲು..!

ಟ್ರೆಂಡಿಂಗ್
share whatsappshare facebookshare telegram
4 Mar 2024
post image

ಮಂಗಳೂರು: ಮಂಗಳೂರು ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

ನೀರಲ್ಲಿ ಮುಳುಗಿ ನಾಪತ್ತೆಯಾಗಿರುವವರನ್ನು ಮಿಲನ್ (20), ಲಿಖಿತ್ (18) ಮತ್ತು ನಾಗರಾಜ್ (24) ಎಂದು ಗುರುತಿಸಲಾಗಿದೆ. ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ, ನಾಗರಾಜ್ ಬೈಕಂಪಾಡಿಯಲ್ಲಿರುವ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು. ಇವರು ಸ್ನೇಹಿತರಾಗಿದ್ದು, ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಬೃಹತ್‌ ಅಲೆ ಅಪ್ಪಳಿಸಿ ಕೊಚ್ಚಿಕೊಂಡು ಹೋಗಿದ್ದಾರೆ. ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.