



ಉಡುಪಿ : ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ. ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.