logo
WhatsApp Image 2026-04-02 at 14.46.04.jpeg
hindalco everlast.jpeg

ತೀರ್ಥಹಳ್ಳಿ: ಬಿಜೆಪಿ ಮುಖಂಡ ಗುಂಡೇಟಿಗೆ ಬಲಿ

ಟ್ರೆಂಡಿಂಗ್
share whatsappshare facebookshare telegram
27 Mar 2022
post image

ತೀರ್ಥಹಳ್ಳಿ: ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ನಡೆದಿದ್ದು, ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ದೌಡಾಯಿಸಿದ್ದಾರೆ.

ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ ಕಾಂತರಾಜ್ ಅವರು ಬಿದ್ದು ಚೀರಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

ಕಾಂತರಾಜ್ ಅವರು ಅಂಬುತೀರ್ಥ ಬಳಿ ಪ್ರಾಣಿ ಶಿಕಾರಿಗೆ ತೆರಳಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮಧ್ಯೆ ಸುದ್ದಿ ತಿಳಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.