



ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದರೂ ಭಾನುವಾರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಲಿಲ್ಲ.
ಹೀಗಾಗಿ ಸೋಮವಾರ ರಾತ್ರಿ ಅಥವಾ ಮಂಗಳವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಬಹುಶಃ ಸೋಮವಾರವೂ ಸಂಸದೀಯ ಮಂಡಳಿ ಸಭೆ ಸೇರಿ ಇನ್ನೊಮ್ಮೆ ಚರ್ಚೆ ನಡೆಸಲಿದೆ
ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಸಿಎಂ ಬೊಮ್ಮಾಯಿ ಈ ಮಾಹಿತಿ ನೀಡಿದರು.
ತಾವು ಸ್ವಕ್ಷೇತ್ರ ಶಿಗ್ಗಾಂವಿಯಿಂದಲೇ ಸ್ಪರ್ಧಿಸುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಗೆಲ್ಲುವ ಮಾನದಂಡದ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಪ್ರತಿಪಕ್ಷಗಳ ಅಭ್ಯರ್ಥಿ, ಕಾರ್ಯತಂತ್ರದ ಆಧಾರದಲ್ಲಿಯೂ ಚರ್ಚಿಸುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದರು.
ಭಾನುವಾರದ ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಕುರಿತು ಪ್ರಸ್ತಾಪವಾದರೂ 100 ಕ್ಷೇತ್ರಗಳ ಕುರಿತು ಮಾತ್ರ ಪೂರ್ಣ ಪ್ರಮಾಣದಲ್ಲಿ ಚರ್ಚೆಯಾಗಿದ್ದು, ಉಳಿದ ಕ್ಷೇತ್ರಗಳ ಕುರಿತು ಸೋಮವಾರ ಮತ್ತೊಮ್ಮೆ ಸಭೆ ಸೇರಿ ಚರ್ಚಿಸಿ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.