logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಕಾರ್ಕಳ ಜ್ಞಾನಸುಧಾದಲ್ಲಿ ಸಂಸ್ಥಾಪಕರ ದಿನಾಚರಣೆ.

ಟ್ರೆಂಡಿಂಗ್
share whatsappshare facebookshare telegram
22 Dec 2023
post image

ಕಾರ್ಕಳ: ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಹಾಗೂ ಶ್ರೇಷ್ಠ ಗಣಿತಜ್ಞ ಶ್ರೀನಿವಾಸ್ ರಾಮಾನುಜನ್‌ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಡಿ. 23ರಂದು ಸಂಜೆ 5 ಗಂಟೆಗೆ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜೆ.ಇ.ಇ. ಅಡ್ವಾನ್ಸ್ಡ್ ಮೂಲಕ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರವೇಶ ಗಳಿಸಿದ ಈರ್ವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ ಮೂಲಕ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರವೇಶಿಸಿದ ನಾಲ್ವರು ವಿದ್ಯಾರ್ಥಿಗಳನ್ನು, ನೀಟ್ ಪರೀಕ್ಷೆಯ ಮೂಲಕ ಎಂ.ಬಿ.ಬಿ.ಎಸ್ ಪ್ರವೇಶ ಗಳಿಸಿದ 108 ವಿದ್ಯಾರ್ಥಿಗಳನ್ನು, ಕೆ.ಸಿ.ಇ.ಟಿ ಇಂಜಿನಿಯರಿಂಗ್ ನಲ್ಲಿ ಒಂದು ಸಾವಿರದೊಳಗಿನ ರ್ಯಾಂಕ್ ಗಳಿಸಿದ 24 ವಿದ್ಯಾರ್ಥಿಗಳನ್ನು, ಸಿ.ಎ.ಫೌಂಡೇಶನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾಧಕರನ್ನು ಹಾಗೂ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿರುವರು. ಕಾರ್ಕಳ ಶಾಸಕ ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಕಾರ್ಕಳದ ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿ ಅವರ ಪತ್ನಿ ಪ್ರಕಾಶಿನಿ ಜಿ. ಭಂಡಾರಿ, ಉಡುಪಿಯ ಶಾಸಕ ಮತ್ತು ದ.ಕ ಹಾಗೂ ಉಡುಪಿ ಜಿಲ್ಲಾ ಕೋ-ಅಪರೇಟಿವ್ ಫಿಶ್ ಮಾರ್ಕೆಟಿಂಗ್ ಫೆಡರೇಶನ್ ಮಂಗಳೂರು ಇದರ ಅಧ್ಯಕ್ಷ ಯಶ್ ಪಾಲ್ ಎ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎ.ಪಿ.ಜಿ.ಇ.ಟಿ.ಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.