



ಕಾರ್ಕಳ: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಜನವರಿ 11 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಮಾಳ ಗ್ರಾಮದಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ, 11 ಗಂಟೆಗೆ ಪೆರ್ಡೂರು ಬುಕ್ಕಿಗುಡ್ಡೆ ಕುಲಾಲ ಸಭಾಭವನದಲ್ಲಿ ಕುಲಾಲ ಸಂಘ ಪೆರ್ಡೂರು- ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ, ಮ.2.30 ಕ್ಕೆ ಕಾರ್ಕಳ ವಿಕಾಸ ಜನಸೇವಾ ಕಚೇರಿಯಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಸಮಾರಂಭದ ಕುರಿತು ಸಂಜೀವಿನಿ ಒಕ್ಕೂಟದ ಪ್ರಮುಖರೊಂದಿಗೆ ಸಭೆ, 3.30 ಕ್ಕೆ ನಿಟ್ಟೆ ಕೆಮ್ಮಣ್ಣು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕೇಶವ ಭಜನಾ ಮಂಡಳಿ ಗ್ರಾಮೋತ್ಸವ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ, ಸಂಜೆ 4 ಗಂಟೆಗೆ ನಿಟ್ಟೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕಾರ್ಕಳ ತಾಲೂಕಿನ ವಿವಿಧ ಗ್ರಾಮಗಳ 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ, 6 ಗಂಟೆಗೆ ಕುಕ್ಕುಂದೂರು ಗ್ರಾಮ ಪಂಚಾಯತ್ ಬಳಿಯ ರಾಮಮಂದಿರದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಸಮಾರಂಭದ ಕುರಿತು ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ನಂತರ ಕಾರ್ಕಳದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.