



ಚಿಕ್ಕಮಗಳೂರು: ಗಿರಿ ತಪ್ಪಲಿನ ಪ್ರವಾಸಿ ತಾಣಗಳಿಗೆ ಸರ್ಕಾರದಿಂದ ಮಾನ್ಯತೆ ಪಡೆದ ಟ್ಯಾಕ್ಸಿ ವಾಹನಗಳನ್ನು ಹೊರತುಪಡಿಸಿ ಪ್ರವಾಸಕ್ಕೆ ಬರುವವರ ಖಾಸಗಿ ವಾಹನಗಳನ್ನು ಶಾಶ್ವತವಾಗಿ ನಿರ್ಬಂಧಿಸುವ ಕ್ರಮವನ್ನು ಸದ್ಯದಲ್ಲೇ ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ. ಟ್ರಾಫಿಕ್ ಜಾಮ್‌ನಂತಹ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಬಾಡಿಗೆ ಟ್ಯಾಕ್ಸಿಗಳಲ್ಲಿ ಪ್ರವಾಸಕ್ಕೆ ಬರುವವನ್ನು ಹೊರತುಪಡಿಸಿ ಪ್ರವಾಸಿಗರ ಖಾಸಗಿ ವಾಹನಗಳನ್ನು ಕೈಮರದ ಬಳಿಯೇ ನಿಲುಗಡೆ ಗೊಳಿಸಿ ಜಿಲ್ಲಾಡಳಿತ ಅನುಮತಿ ನೀಡಿದ ಜೀಪುಗಳಲ್ಲಿ ಪ್ರವಾಸಿಗರನ್ನು ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು ಎಂದರು. ಪಾರ್ಕಿಂಗ್ ವ್ಯವಸ್ಥೆ ಮಾಡಲು ಜಮೀನನ್ನು ಸಹ ಗುರುತಿಸಲಾಗಿದೆ. ಅಲ್ಲಿ ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇನ್ನು ಹತ್ತು ದಿನಗಳಲ್ಲಿ ಕ್ರಿಯಾ ಯೋಜನೆ ಮುಗಿಯಲಿದೆ. ನಂತರ ಗಿರಿ ಪ್ರದೇಶಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗುವುದು ಎಂದರು. ಕೈಮರದಿಂದ ಗಿರಿ ಪ್ರದೇಶದ ತಾಣಗಳಿಗೆ ಕರೆದೊಯ್ಯಲು ಜೀಪುಗಳಿಗೆ ಜಿಲ್ಲಾಡಳಿತವೇ ದರ ನಿಗದಿಪಡಿಸುತ್ತದೆ. ಅದರಿಂದ ಬರುವ ಆದಾಯವನ್ನು ಪ್ರವಾಸಿ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಇದರಿಂದ ಒಂದಷ್ಟು ಮಂದಿಗೆ ಉದ್ಯೋಗವೂ ಸಿಕ್ಕಂತಾಗುತ್ತದೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.