



ನವದೆಹಲಿ: ಆಟೊಮೊಬೈಲ್ ಕ್ಷೇತ್ರದಲ್ಲಿ ದೇಶದ ಮುಂಚೂಣಿಯ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (64)ನ.29 ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ವಿಕ್ರಮ್ ಕಿರ್ಲೋಸ್ಕರ್ ಅವರು ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರರಾಗಿದ್ದರು. ಅಲ್ಲದೆ ಕಿರ್ಲೋಸ್ಕರ್ ಗುಂಪಿನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷರೂ ಆಗಿದ್ದರು..ನ.30 ರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.