



ಉಡುಪಿ, ಜೂನ್ 29: ರಾಷ್ಟ್ರಿಯ ಹೆದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸೆಪ್ಟಂಬರ್ 15 ರವರೆಗೆ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮಳಿಗಳು 1989ರ ಕಲಂ 221(ಎ)(2) & (5) ರ ಅನ್ವಯ ಸದರಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.
ತೀರ್ಥಹಳ್ಳಿಯಿಂದ ಉಡುಪಿಗೆ ಚಲಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ- ಕುಂದಾಪುರ ಮಾರ್ಗವಾಗಿ ಉಡುಪಿಗೆ ಚಲಿಸುವಂತೆ ಹಾಗೂ ಉಡುಪಿಯಿಂದ ತೀರ್ಥಹಳ್ಳಿ ಮಾರ್ಗವಾಗಿ ಚಲಿಸುವ ಭಾರಿ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮಾರ್ಗವಾಗಿ ತೀರ್ಥಹಳ್ಳಿಗೆ ಚಲಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.