



ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಪಾವತಿಸಲು ಸರ್ಕಾರ ಮತ್ತೆ ಶೇ.50 ರಿಯಾಯಿತಿ ಘೋಷಿಸಿದೆ. ಸೆಪ್ಟೆಂಬರ್ 9ರವರೆಗೆ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಹಿಂದೆ ರಿಯಾಯಿತಿ ನೀಡಿದ್ದಾಗ ಭಾರೀ ಮೊತ್ತದ ದಂಡ ಸಂಗ್ರಹವಾಗಿತ್ತು.
ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈಗಿನ ಸರ್ಕಾರವೂ ಮುಂದಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.