


ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳದ ಕ್ಷೇಮವನದಲ್ಲಿ ಇಂದಿನಿಂದ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸಭಾಪತಿ ಯು.ಟಿ. ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಭಾಗಿಯಾಗಲಿದ್ದಾರೆ
ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ. ನಿನ್ನೆ (ಜೂ. 25)ರ ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಂಡಿದ್ದಾರೆ.
ಇಂದಿನಿಂದ ಜೂ. 26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು (ಕಾರ್ಯಕ್ರಮಗಳು) ನಡೆಯಲಿವೆ. ಬೆಳಗ್ಗೆ 10 ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಹಾಗೂ ತಮ್ಮ ರಾಜಕೀಯ ಅನುಭವಗಳ ಕುರಿತು ಮಾಹಿತಿ ನೀಡಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.