



ಕೀವ್: ಉಕ್ರೇನ್‌ನಲ್ಲಿ ಎರಡು ತರಬೇತಿ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಪೈಲಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೀವ್‌ನ ಪಶ್ಚಿಮಕ್ಕೆ ಸುಮಾರು 140 ಕಿ.ಮೀ ದೂರದಲ್ಲಿರುವ ಟೊಮಿರ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ . ಯುದ್ಧ ಕಾರ್ಯಾಚರಣೆ ನಿಮಿತ್ತ ಕರ್ತವ್ಯ ನಿರ್ವಹಿಸುತ್ತಿರುವಾಗ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು , ಅವಘಡದಲ್ಲಿ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನ್ ‘ ವಾಯುಪಡೆ ಮಾಹಿತಿ ನೀಡಿದೆ.
ಸೇನಾ ಸಿಬ್ಬಂದಿ ಅಗಲಿಕೆಯಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮೃತರ ಕುಟುಂಬಗಳಿಗೆ ಉಕ್ರೇನ್ ವಾಯುಪಡೆ ಸಂತಾಪ ವ್ಯಕ್ತಪಡಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.