



ಉಡುಪಿ: ವಿದ್ಯಾರ್ಥಿನಿಯೋರ್ವಳ ಮೊಬೈಲ್‌ಗೆ ಲಿಂಕ್ ಕಳಿಸಿ ಆಕೆಯ ಖಾತೆಯಿಂದ ಒಟ್ಟು 80,602ರೂ. ಹಣವನ್ನು ಆನ್ ಲೈನ್ ವರ್ಗಾವಣೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ಇತ್ತೀಚೆಗೆ ನಡೆದಿದೆ. ನಡೆದಿದೆ.
ರೂಪಶ್ರೀ ಎಂ.ಸಿ ಎಂಬ ವಿದ್ಯಾರ್ಥಿನಿ ಹಣಕಳೆದುಕೊಂಡವರು . ವಿದ್ಯಾ ವ್ಯಾಸ ಕ್ಕಾಗಿ ಪುಸ್ತಕಗಳನ್ನು ಆನ್ ಲೈನ್ ನಲ್ಲಿ ಖರೀದಿಸಲುವ ಆರ್ಡರ್ ಮಾಡಿ ಒಂದು ವಾರ ಕಳೆದರೂ ಪುಸ್ತಕಗಳು ಬಾರದಿದ್ದಾಗ ಗೂಗಲ್ ನಲ್ಲಿ ಕೋರಿಯರ್ ಸಂಸ್ಥೆಯ ವಿವರವನ್ನು ಹುಡುಕಾಡಿ ಕಂಡು ಬಂದ ಮೊಬೈಲ್ ನಂಬ್ರ ಕ್ಕೆ ಕರೆ ಮಾಡಿದ್ದಾರೆ. ಆಗ ವ್ಯಕ್ತಿಯೊಬ್ಬ ತಾನು ಕೋರಿಯರ್ ಸಂಸ್ಥೆಯವನೆಂದು ನಂಬಿಸಿ, ವಿದ್ಯಾರ್ಥಿನಿಯ ಮೊಬೈಲ್ ಗೆ ಲಿಂಕ್ ಒಂದನ್ನು ಕಳುಹಿಸಿ, ವಿವರ ಪಡೆದು, ಅದೇ ದಿನ ಕ್ರಮವಾಗಿ 19 ಟ್ರಾನ್ಸೆಕ್ಷನ್ ಮುಖೇನ ಆಕೆಯ ಹೆಚ್.ಡಿ.ಎಫ್.ಸಿ. ಬ್ಯಾಂಕ್, ಕುಂದಾಪುರ ಖಾತೆಯ, ಖಾತೆಯಿಂದ ಒಟ್ಟು ರೂಪಾಯಿ 80,602 ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿಕೊಂಡಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.