



ಬೆಂಗಳೂರು: ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯಾದ್ಯಂತ 14 ಐಎಎಸ್ ಅಧಿಕಾರಿಗಳನ್ನು ಮಂಗಳವಾರ ತಡರಾತ್ರಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಂತ್ರಜ್ಞಾನ ನಿದೇಶಕ ಐಎಎಸ್ ಅಧಿಕಾರಿ ಮೀನಾ ನಾಗರಾಜ್ ಸಿಎನ್ ಅವರನ್ನು ಮುಂದಿನ ಆದೇಶದವರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ವಿಪತ್ತು ನಿರ್ವಹಣೆ ಪ್ರಾಧಿಕಾರದ ಬೆಂಗಳೂರಿನ ಆಯುಕ್ತ, ಪ್ರಭು ಜಿ ಐಎಎಸ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಐಎಎಸ್ ಅಧಿಕಾರಿ ನವೀನ್ ಸಾಗರ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.
ಸರ್ಕಾರದ ಉಪ ಕಾರ್ಯದರ್ಶಿ ಹಾಗೂ ಐಎಎಸ್ ಅಧಿಕಾರಿ ಡಾ. ಆನಂದ್ ಕೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಖಾಲಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಜಂಟಿ ನಿರ್ದೇಶಕರು ಹಾಗೂ ಐಎಎಸ್ ಅಧಿಕಾರಿ ಡಾ. ಗೋಪಾಲ ಕೃಷ್ಣ ಎಚ್‌ಎನ್ ಅವರನ್ನು ತಕ್ಷಣವೇ ಜಾರಿಗೆ ಬರವಂತೆ ಹಾಗೂ ಮುಂದಿನ ಆದೇಶದ ವರೆಗೆ ಬೆಂಗಳೂರು ಕಾರ್ಮಿಕ ಆಯುಕ್ತರಾಗಿ ನೇಮಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.