logo
WhatsApp Image 2026-04-02 at 14.46.04.jpeg
hindalco everlast.jpeg

ಜಗತ್ತಿನ ನಿದ್ದೆಗೆಡಿಸಿದ ಓಮಿಕ್ರಾನ್' ಕರೋನ ರೂಪಾಂತರ.. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ!

ಟ್ರೆಂಡಿಂಗ್
share whatsappshare facebookshare telegram
27 Nov 2021
post image

ಕೇಪ್ಟೌನ್ : ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್‌ನ ಹೊಸ ರೂಪಾಂತರ ತಳಿಗೆ ಓಮಿಕ್ರಾನ್' ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಪುರ ಹೇಳಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.ದಕ್ಷಿಣ ಅಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾವೈರಾಣುವಿನ ಹೊಸ ತಳಿಯ ವಿರುದ್ಧ ಕೋವಿಡ್‌-19 ತಡೆ ಲಸಿಕೆಗಳು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ. ಈ ತಳಿಯ ವೈರಾಣು ಆಫ್ರಿಕಾ ಖಂಡದಿಂದಾಚೆಗೆ ಈಗಾಗಲೇ ಹರಡಿರುವ ಅಪಾಯವಿದೆ. ಇದನ್ನು ನಿಯಂತ್ರಿಸದೇ ಇದ್ದರೆ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ' ಎಂದು ಬ್ರಿಟನ್‌ನ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್‌, ಬೆಲ್ಜಿಯಂ ಮತ್ತು ಹಾಂಗ್‌ಕಾಂಗ್‌ನಲ್ಲಿ ಈ ತಳಿಯ ವೈರಾಣು ತಗುಲಿರುವ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ

ಈ ತಳಿಯ ವೈರಾಣು ಪತ್ತೆಯಾಗಿರುವ ಆಫ್ರಿಕಾದ ಆರು ರಾಷ್ಟ್ರಗಳಿಂದ ವಿಮಾನ ಸಂಚಾರವನ್ನು ಹಲವು ದೇಶಗಳು ನಿಷೇಧಿಸಿವೆ. ಬ್ರಿಟನ್, ಜರ್ಮನಿ ಮತ್ತು ಇಟಲಿ ಈ ದೇಶಗಳಿಗೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ನಂತರ, ಮಲೇಷ್ಯಾ, ಸಿಂಗಪುರ, ಇಸ್ರೇಲ್ ಇದನ್ನೇ ಅನುಸರಿಸಿದವು. ಆನಂತರ ಐರೋಪ್ಯ ಒಕ್ಕೂಟವೂ ಈ ದೇಶಗಳಿಗೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.