



ಚಮೇಲಿಯ: ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು 15ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಚಮೇಲಿಯ ಅಲಕಾನಂದ ನದಿ ಬಳಿ ನಡೆದಿದೆ.
ನಮಾಮಿ ಗಂಗೆ ಯೋಜನೆಯ ಕಾಮಗಾರಿ ವೇಳೆ ಈ ದುರಂತ ನಡೆದಿದೆ. ಇನ್ನೂ ಹಲವಾರು ಜನ ಅಪಾಯದಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.