


ಬೆಂಗಳೂರು: ಬಸ್‌ಗಳು ಮತ್ತು ಅವುಗಳ ಸಿಬ್ಬಂದಿಗಳ ಮೇಲೆ ದಾಳಿ ನಡೆದ ನಂತರ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
"ನಾವು ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ(MSRTC) ಸಹ ಕರ್ನಾಟಕಕ್ಕೆ ಬಸ್‌ಗಳ ಕಾರ್ಯಾಚರಣೆಯನ್ನು ನಿಲ್ಲಿಸಿದೆ" ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(NWKRTC)ದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇಂದು ಬೆಳಗಾವಿ ಚಲೋ ಗೆ ಕರೆ ನೀಡಿದ್ದು, ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.