



ಕುಂದಾಪುರ: ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ಯವರನ್ನು ಇಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ,ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿನ ಛಾಯಾಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಡೆಯವರು ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದರು. ಈ ಸಂದರ್ಭ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾದ ಆನಂದ ಬಂಟ್ವಾಳ್,ಕುಂದಾಪುರ-ಬೈಂದೂರು ವಲಯ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ,ಸಲಹಾ ಸಮಿತಿ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ,ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ,ಅಮೃತ್ ಬೀಜಾಡಿ,ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.