



ಭೋಪಾಲ್: ನಿಲ್ಲಿಸಿದ್ದ ಬಸ್ ಗಳಿಗೆ ಟ್ರಕ್ ಢಿಕ್ಕಿ ಹೊಡೆದು 8 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ಫೆ.25 ರಂದು ನಡೆದಿದೆ. ಸತ್ನಾ ನಗರದಲ್ಲಿ ‘ಕೋಲ್ ಮಹಾಕುಂಭ’ದಲ್ಲಿ ಭಾಗಿಯಾಗಿ ಬರುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಹಾರಕ್ಕಾಗಿ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ ರೇವಾ ಕಡೆಯಿಂದ ವೇಗವಾಗಿ ಬಂದ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬಸ್ ಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಒಂದು ಬಸ್ ಕಂದಕಕ್ಕೆ ಉರುಳಿದ್ದು, 8 ಮಂದಿ ಮೃತಪಟ್ಟಿದ್ದಾರೆ ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.