



ನವದೆಹಲಿ: ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟ್ಟರ್ ಖಾತೆಗೆ ನಿರ್ಬಂಧ ಹೇರಲಾಗಿದೆ. ಕಾನೂನಿನ ಬೇಡಿಕೆಯ ಮೇರೆಗೆ, ಟ್ವಿಟರ್ ಸಂಸ್ಥೆ ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಖಾತೆಯನ್ನು ನಿರ್ಬಂಧಿಸಿದೆ.
ಪಾಕಿಸ್ತಾನದ ಟ್ವಿಟ್ಟರ್ ಖಾತೆಯನ್ನು ಭಾರತದಲ್ಲಿ ತಡೆ ಹಿಡಿಯುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಈ ಪ್ರಕ್ರಿಯೆ ನಂತರ ಪಾಕಿಸ್ತಾನದ ಟ್ವಿಟ್ಟರ್ ಖಾತೆಯನ್ನು ಭಾರತದಲ್ಲಿನ ಜನರು ಈ ಖಾತೆಯನ್ನು ನೋಡಲು ಸಾಧ್ಯವಾಗುವುದಿಲ್ಲ.
ಪಾಕಿಸ್ತಾನದ ರಾಯಭಾರಿ ಕಚೇರಿಗಳ ಅಧಿಕೃತ ಖಾತೆಗಳು, ಟರ್ಕಿ, ಇರಾನ್ ಮತ್ತು ಈಜಿಪ್ಟ್‌ನ ಅಧಿಕೃತ ಖಾತೆಗಳನ್ನು ನಿಷೇಧಿಸಲಾಗಿದೆ. ಆಗಸ್ಟ್‌ನಲ್ಲಿ, ಭಾರತವು ಎಂಟು ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿರ್ಬಂಧಿಸಿದೆ.
ಕಂಪನಿಯ ಮಾರ್ಗಸೂಚಿಗಳು ನ್ಯಾಯಾಲಯದ ಆದೇಶದಂತಹ ಮಾನ್ಯ ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ @GovtofPakistan ಖಾತೆಯನ್ನು ತಡೆಹಿಡಿಯಲಾಗಿದೆ. ಈ ಬಗ್ಗೆ ಟ್ವಿಟ್ಟರ್ ಗುರುವಾರ ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.