ಬೆಂಗಳೂರು: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ನ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣುಮಗುವಿನಲ್ಲಿ ಪತ್ತೆಯಾಗಿತ್ತು. ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV ರೋಗನಿರ್ಣಯ ಮಾಡಲಾಯಿತು. ಸಚಿವಾಲಯದ ಮಾಹಿತಿ ಪ್ರಕಾರ ಆಕೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಎರಡನೇ ಪ್ರಕರಣವು 8 ತಿಂಗಳ ಗಂಡು ಶಿಶುವಿನಲ್ಲಿ ಪತ್ತೆಯಾಗಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಎರಡು ಶಿಶುಗಳಿಗೂ ಯಾವುದೇ ಅಂತರರಾಷ್ಟ್ರೀಯ ಪ್ರಯಾಣದ ಇತಿಹಾಸವಿಲ್ಲ ಎಂದು ICMR ದೃಢಪಡಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಧ್ಯಾಹ್ನ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಮತ್ತು ಪ್ರಧಾನ ಆರೋಗ್ಯ ಕಾರ್ಯದರ್ಶಿ ಹರ್ಷಗುಪ್ತ ಸೇರಿದಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.