logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಎರಡು ದಿನ ಭಾರಿ ಗುಡುಗು ಮಳೆ .ಹೈ ಎಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಟ್ರೆಂಡಿಂಗ್
share whatsappshare facebookshare telegram
23 Oct 2021
post image

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ. ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.