logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

ಟ್ರೆಂಡಿಂಗ್
share whatsappshare facebookshare telegram
28 Aug 2023
post image

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರಪಾಲಾದ ಘಟನೆ (ಆ. 27) ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಅಳ್ವೆ ಗದ್ದೆ ಬಳಿ ನಡೆದಿದೆ. ಗಂಗೊಳ್ಳಿ ಗ್ರಾಮದ ಮುಸಾಬ್ (22) ಮತ್ತು ನಜಾನ್‌ (24) ಕಾಣೆಯಾದ ಮೀನುಗಾರರು.

ನಾಲ್ವರು ಮೀನುಗಾರರು ಕೈರಂಪಣಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದರು. ಬಲೆ ಬೀಸುತ್ತಿದ್ದಾಗ ನಾಲ್ವರ ಪೈಕಿ ಇಬ್ಬರು ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಉಳಿದ ಇಬ್ಬರು ಕೂಡಲೇ ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಮುಸಾಬ್ ಮತ್ತು ನಜಾನ್ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.