logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಕೋವಿಡ್ ಸೋಂಕಿಗೆ 'ಇಬ್ಬರು' ಬಲಿ..!

ಟ್ರೆಂಡಿಂಗ್
share whatsappshare facebookshare telegram
20 Dec 2023
post image

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ( Covid19 ) ಸೋಂಕು ಹೆಚ್ಚಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಇವರೆಗೆ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರದಲ್ಲಿ 359 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 19 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದು ವರದಿಯಲ್ಲಿ ದೃಢಪಟ್ಟಿದೆ ಎಂದಿದೆ. ಚಿಕ್ಕಬಳ್ಳಾಪುರದಲ್ಲಿ 94 ಮಂದಿಯನ್ನು ಪರೀಕ್ಷೆ ( Covid19 Test ) ನಡೆಸಲಾಗಿದೆ. ಧಾರವಾಡದಲ್ಲಿ ಐವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಯಾರಿಗೂ ಸೋಂಕು ದೃಢಪಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಅವರಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ. ಬಳ್ಳಾರಿಯಲ್ಲಿ ಪರೀಕ್ಷೆಗೆ ಒಳಗಾದಂತ ಇಬ್ಬರಿಗೂ ಕೋವಿಡ್ ಪಾಸಿಟಿವ್ ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಇಂದು ರಾಜ್ಯಾಧ್ಯಂತ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ. ಅಂದ ಹಾಗೇ ಒಟ್ಟು ಆರ್ ಟಿ ಪಿಸಿಆರ್ ಮೂಲಕ 407 ಪರೀಕ್ಷೆಯನ್ನು ನಡೆಸಲಾಗಿತ್ತು. ಅವರಲ್ಲಿ 19 ಮಂದಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇನ್ನೂ ರ್ಯಾಟ್ ಮೂಲಕ 401 ಮಂದಿಯನ್ನು ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ. ಒಟ್ಟಾರೆ 808 ಮಂದಿಯ ಪರೀಕ್ಷೆಯಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.