



ನವದೆಹಲಿ: ಉಬರ್ ಕಂಪನಿಯು ಜೂನ್ ತಿಂಗಳಿನಿಂದ ಬೆಂಗಳೂರಿನಲ್ಲಿ ಇ.ವಿ. ಕ್ಯಾಬ್ ಸೇವೆಗಳನ್ನು ಆರಂಭಿಸಲಿದೆ. ಇದು ಆರಂಭವಾದ ನಂತರದಲ್ಲಿ ಉಬರ್ ಗ್ರಾಹಕರು, ಕ್ಯಾಬ್ ಸೇವೆ ಪಡೆಯುವ ಸಂದರ್ಭದಲ್ಲಿ ಇ.ವಿ. ಕ್ಯಾಬ್ ಬೇಕು ಎಂಬ ಬೇಡಿಕೆ ಸಲ್ಲಿಸಲು ಅವಕಾಶ ಲಭ್ಯವಾಗಲಿದೆ.
ಈ ಸೇವೆಯು ಬೆಂಗಳೂರು ಮಾತ್ರವಲ್ಲದೆ ಮುಂಬೈ ಹಾಗೂ ದೆಹಲಿಯಲ್ಲಿಯೂ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಇದನ್ನು ಹಂತ ಹಂತವಾಗಿ ಇತರ ನಗರಗಳಿಗೂ ವಿಸ್ತರಿಸಲಾಗುತ್ತದೆ ಎಂದು ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾ ಅಧ್ಯಕ್ಷ ಪ್ರಭಜೀತ್ ಸಿಂಗ್ ಹೇಳಿದ್ದಾರೆ.
ಇ.ವಿ.ಗಳಿಗೆ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲು ಜಿಯೊ-ಬಿಪಿ ಹಾಗೂ ಜಿಎಂಆರ್ ಗ್ರೀನ್ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಉಬರ್ ಪಾಲಿಗೆ ಪ್ರಮುಖವಾಗಿರುವ ಏಳು ನಗರಗಳಲ್ಲಿ ಒಟ್ಟು 25 ಸಾವಿರ ಇ.ವಿ.ಗಳನ್ನು ಸೇವೆಗೆ ಮುಕ್ತವಾಗಿಸಲಾಗುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.