



ಉಚ್ಚಿಲ: ಉಚ್ಚಿಲ ಬಡಾ ಗ್ರಾಮದ 300ಕ್ಕೂ ಹೆಚ್ಚು ಮೀನುಗಾರ ಮುಖಂಡರು ಹಾಗೂ ಯುವಕ ಮತ್ತು ಯುವತಿಯರು ಕಾಂಗ್ರೆಸ್ ಪಕ್ಷಕ್ಕೆ ಎ.3ರಂದು ಸೇರ್ಪಡೆಗೊಂಡರು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಮೀನುಗಾರರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, ಕಡಲ ತಡಿಯ ಈ ಭಾಗದಲ್ಲಿ ಮೀನುಗಾರರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇಷ್ಟು ಜನ ಮೀನುಗಾರರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಇದೇ ಮೊದಲು. ಮೊಗವೀರ ಸಮಾಜವನ್ನು ಕೇವಲ ಓಟ್ ಬ್ಯಾಂಕ್ ಗೆ ಉಪಯೋಗಿಸಿಕೊಂಡ ಬಿಜೆಪಿ ಅವರನ್ನು ಬಹಳಷ್ಟು ಸೌಲಭ್ಯದಿಂದ ವಂಚಿತರನ್ನಾಗಿಸಿದೆ. ಕರಾವಳಿ ಭಾಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಈ ಬಾರಿ ವಿಶೇಷ ಅನುದಾನ ಹಾಗೂ ಪ್ರಣಾಳಿಕೆಯನ್ನು ಜಾರಿಗೊಳಿಸುವ ಪ್ರಾಮಾಣಿಕ ಭರವಸೆಯನ್ನು ನೀಡಿದೆ. ಭರವಸೆ ಈ ದೇರಿಸುವ ಸಂಪೂರ್ಣ ಜವಬ್ದಾರಿ ನನ್ನ ಹೆಗಲ ಮೇಲಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ ಅಮೀನ್, ದೀಪಕ್ ಎರ್ಮಾಳ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಶೇಖಬ್ಬಾ, ಮೊಗವೀರ ಮುಖಂಡರಾದ ಸುಕುಮಾರ್ ಬಂಗೇರ, ರೂಪೇಶ್ ಮೆಂಡನ್, ಜೀವನ್ ಮೆಂಡನ್, ಆನಂದ್ ತಿಂಗಳಾಯ, ಅನಿಶ್, ಯಶ್ವಂತ್ ಬಂಗೇರ, ಉಮೇಶ್ ಪೂಜಾರಿ, ದಯಾನಂದ ಕೋಟ್ಯಾನ್, ಶಿವಣ್ಣ ಬಂಗೇರ, ಲಕ್ಷ್ಮಣ್ ಗುರಿಕಾರ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.