



ಮುಂಬೈ: ಕೋಟಕ್ ಮಹೀಂದ್ರಾ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕ್ ಶನಿವಾರ ತಿಳಿಸಿದೆ.
ಜಂಟಿ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಗುಪ್ತಾ ಅವರು ಡಿಸೆಂಬರ್ 31 ರವರೆಗೆ ಮುಖ್ಯ ಕಾರ್ಯನಿರ್ವಾಹಕರಾಗಿರಲಿದ್ದಾರೆ ಎಂದು ಬ್ಯಾಂಕ್ ಷೇರು ವಿನಿಮಯ ಫೈಲಿಂಗ್ ನಲ್ಲಿ ಹೇಳಿದೆ.
ಉದಯ್ ಕೋಟಕ್ ಅವರು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ಥಾನದಿಂದ ಕೆಳಗಿಳಿದಿದ್ದು, ಇಂದು ನಡೆದ ಬ್ಯಾಂಕ್ ಮಂಡಳಿಯ ಸಭೆಯಲ್ಲಿ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆಯನ್ನು ಪರಿಗಣಿಸಿದ್ದು, ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದಾರೆ ಎಂದು ಮಾಹಿತಿ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.