



ಬೆಂಗಳೂರು: ರಾಜಸ್ಥಾನದ ಉದಯ್‌ಪುರನ ಕನ್ಹಯ್ಯ ಕುಮಾರ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾದ ಹಿನ್ನೆಲೆಯಲ್ಲಿ ದೇಶದಾದ್ಯಂತ ಹಿಂದೂಪರ ಸಂಘಟನೆಗಳು ಭಾರಿ ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ.. . ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.. ಹೀಗಾಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಸೂಚಿಸಲಾಗಿದೆ.ಬೀಟ್ ಪೊಲೀಸರು ಅಲರ್ಟ್ ಆಗಿರಲು ಸೂಚಿಸಲಾಗಿದೆ.
ರಾಜಸ್ಥಾನದ ಉದಯಪುರ ದಲ್ಲಿಇದೀಗ ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ದಳ(ಎನ್ ಐಎ) ತನಿಖೆ ಕೈಗೊಂಡಿದೆ..
ವೀಡಿಯೋ ದೃಶ್ಯಾವಳಿ ಆಧರಿಸಿ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತನ್ನ ಅಂಗಡಿಯಲ್ಲಿ ಟೈಲರ್ ಅನ್ನು ಕೊಲೆ ಮಾಡಿದ ಹಂತಕರು ಚಿತ್ರೀಕರಿಸಿದ ಘಟನೆ ರಾಜಸ್ಥಾನದ ಉದಯಪುರ ನಗರದಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.. ಇಂಟರ್ನೆಟ್ ಸಂಪರ್ಕ ಸ್ಥಗಿತ ಗೊಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.