



ಉಡುಪಿ, : ರಾಜ್ಯ ಸರಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ಇವರ ವತಿಯಿಂದ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭವು ಏಪ್ರಿಲ್ 21 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿರುವರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಭಾಗವಹಿಸಲಿದ್ದು, ದೊಡ್ಡಣ್ಣಗುಡ್ಡೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತ ನಿರ್ದೇಶಕ
ಡಾ.ಪಿ.ವಿ.ಭಂಡಾರಿ ಇವರಿಂದ “ಮಾನಸಿಕ ಒತ್ತಡ ನಿರ್ವಹಣೆ” ಕುರಿತು ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರಕಾರಿ ನೌಕರರ ಸಂಘ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.