



: ಉಡುಪಿ,: ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ಉದ್ದಿಮೆಗಳ ಅಭಿವೃದ್ಧಿಗಾಗಿ ಉದ್ಯಮಿಯಾಗು ಹಾಗೂ ಉದ್ಯೋಗ ನೀಡು ಕಾರ್ಯಾಗಾರವು ಮೇ 12 ರಂದು ಮಂಗಳೂರು, ಕೊಡಿಯಾಲ್ಬೈಲ್ನ ಡಾ.ಟಿ.ಎಮ್.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.30 ರವರೆಗೆ ಮಣಿಪಾಲದ ರಜತಾದ್ರಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ವರ್ಚುವಲ್ ವೇದಿಕೆ ಮೂಲಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಾಗಾರದಲ್ಲಿ ಕೈಗಾರಿಕೆ ಸ್ಥಾಪನೆಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆ, ಮೂಲಸೌಕರ್ಯ, ಹಣಕಾಸು ಸೌಲಭ್ಯ ಹಾಗೂ ಯಶಸ್ವಿ ಯುವ ಉದ್ದಿಮೆದಾರರಿಂದ ಅವರ ಯಶೋಗಾಥೆ ಬಗ್ಗೆ ಮಾಹಿತಿ ನೀಡಲಾಗುವುದು. ಉದ್ದಿಮೆದಾರರು ವೆಬ್ಸೈಟ್ https://ebiz.karnataka.gov.in/eBiz/Public/EntrepreneurRegistration ಮೂಲಕ ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2575650, ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಮೊಬೈಲ್ ಸಂಖ್ಯೆ: 9448623952 ಹಾಗೂ ಸಹಾಯಕ ನಿರ್ದೇಶಕ ಜಿ. ವಾಮನ ನಾಯ್ಕ್ ಮೊಬೈಲ್ ಸಂಖ್ಯೆ: 9448409488 ಅನ್ನು ಸಂಪರ್ಕಿಸುವAತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.