



ಉಡುಪಿ, : ರಾಷ್ಟಿçÃಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಸಂಸ್ಥೆಗಳ ಜಾಲ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಹಯೋಗದೊಂದಿಗೆ, 14 ರಿಂದ 30 ವರ್ಷದೊಳಗಿನ ಸಂಶೋಧಕರಿಗೆ ಏಪ್ರಿಲ್ 16 ಮತ್ತು 17 ರಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ಯುವ ಸಂಶೋಧಕರು ಹಾಗೂ ಆವಿಷ್ಕಾರರ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, ವಿಜ್ಞಾನದ ಹಲವು ವಿಷಯಗಳಿಗೆ ಸಂಬAಧಿಸಿದ ಸ್ಥಳೀಯ ಸಮಸ್ಯೆಗಳನ್ನು ಆಯ್ದು ಅವುಗಳಿಗೆ ವೈಜ್ಞಾನಿಕ ಪರಿಹಾರವನ್ನು ಸೂಚಿಸಲು ಯುವ ಸಂಶೋಧಕರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಫರ್ಧೆಯು ಪ್ರಾದೇಶಿಕ, ರಾಷ್ಟç ಹಾಗೂ ಅಂತರಾಷ್ಟಿçÃಯ ಮಟ್ಟದಲ್ಲಿ ಜರುಗಲಿದ್ದು, ರಾಷ್ಟçಮಟ್ಟದ ಸ್ಪರ್ಧೆಯು ಮೇ 11 ಹಾಗೂ 12 ರಂದು ಗುಜರಾತ್‌ನ ಸಿಗ್ಮಾ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಗೂಗಲ್ ಫಾರ್ಮ್ ಲಿಂಕ್
https://forms.gle/i8zomT8E6Zw2bPdp9£À°
ನಲ್ಲಿ ನೋಂದಾಯಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9483549159, 9448830454 ಅನ್ನು ಸಂಪರ್ಕಿಸುವoತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.