logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅಂಬಲಪಾಡಿಯಲ್ಲಿ ಬೃಹತ್ ಗಾತ್ರದ ಟ್ರಕ್ ಹರಿದು ಬೈಕ್ ಸವಾರ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
1 Sept 2025
post image

ಉಡುಪಿ: ಟ್ರಕ್ ನ ಚಕ್ರದಡಿಗೆ ಸಿಲುಕಿ ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ. ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಸಾವರನನ್ನು ಟ್ರಕ್ ಎಳೆದುಕೊಂಡು ಹೋಗಿದೆ. ಮೃತನನ್ನು ದೆಂದೂರುಕಟ್ಟೆಯ ಪ್ರದೀಪ (38) ಎಂದು ಗುರುತಿಸಲಾಗಿದೆ. ಈತ ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ‌ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿದ್ದು ಸಂಚಾರಿ ಪೋಲಿಸ್ ಅಧಿಕಾರಿಗಳು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಇಲಾಖೆಗೆ‌ ನೆರವಾದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.