



ಉಡುಪಿ: ತಮಿಳುನಾಡು ರಾಜ್ಯದ ತಿರುವಣ ಮಲೈ ಬಿಗ್ ಸ್ಟ್ರೀಟ್ ನಿವಾಸಿ ಷಣ್ಮುಗಂ ಕೆ (70) ಎಂಬ ವೃದ್ಧರು ತಮಿಳುನಾಡಿನಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನವರಾತ್ರಿಯ ರಥದ ಹೂವಿನ ಅಲಂಕಾರ ಕೆಲಸ ಮಾಡಲು ಬಂದಿದ್ದು, ಅಕ್ಟೋಬರ್ 23 ರಂದು ವಾಸವಿದ್ದ ವಸತಿ ಗೃಹದಿಂದ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ತಮಿಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ.9480805434 ಹಾಗೂ ಕಂಟ್ರೋಲ್ ರೂಂ : 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.