logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ವಿವಾಹಿತ ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
23 Dec 2021
post image

ಉಡುಪಿ: ಮನೆಯಿಂದ ಹೊರಗೆ ಹೋದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಮುದೂರು ಗ್ರಾಮದ ಹಾಲಬೇರು ಎಂಬಲ್ಲಿ ನಡೆದಿದೆ.

ಮುದೂರು ಗ್ರಾಮದ ಹಾಲಬೇರು ನಿವಾಸಿ 35 ವರ್ಷದ ಜ್ಯೋತಿ ನಾಪತ್ತೆಯಾದ ಮಹಿಳೆ. ಇವರು ಡಿಸೆಂಬರ್ 19 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಹರೆ: 135 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08254 258233, ಬೈಂದೂರು ವೃತ್ತ ನಿರೀಕ್ಷಕರ ದೂರವಾಣಿ ಸಂಖ್ಯೆ: 08254- 251031 ಅನ್ನು ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.