



ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ಸ್, ಕುಸ್ತಿ, ಹ್ಯಾಂಡ್‌ಬಾಲ್, ನೆಟ್‌ಬಾಲ್, ವೈಟ್‌ಲಿಫ್ಟಿಂಗ್, ಬಾಕ್ಸಿಂಗ್, ವುಷು, ಟೇಕ್ವಾಂಡೋ, ಬಾಲ್ ಬ್ಯಾಡ್ಮಿಂಟನ್ ಮತ್ತು ತ್ರೋಬಾಲ್ ಸ್ಪರ್ಧೇಗಳು ಅಕ್ಟೋಬರ್ 2 ರಿಂದ 4 ರ ವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸ್ಪರ್ಧೆಗಳ ವಿವರ: ಅ. 2 ರಂದು ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ಬಾಲ್ ಬ್ಯಾಡ್ಮಿಂಟನ್ ಮತ್ತು ತ್ರೋಬಾಲ್ ಸ್ಪರ್ಧೆಗಳು, ಅ. 3 ರಂದು ಕುಸ್ತಿ, ಹ್ಯಾಂಡ್‌ಬಾಲ್ ಮತ್ತು ವೈಟ್‌ಲಿಫ್ಟಿಂಗ್ ಸ್ಪರ್ಧೆಗಳು ಹಾಗೂ ಅ. 4 ರಂದು ನೆಟ್‌ಬಾಲ್, ಬಾಕ್ಸಿಂಗ್, ವುಷು ಮತ್ತು ಟೇಕ್ವಾಂಡೋ ಸ್ಪರ್ಧೆಗಳು ನಡೆಯಲಿವೆ.
ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿ/ ತಂಡಗಳು ವಿಭಾಗಮಟ್ಟದ ಕ್ರೀಡಾಕೂಟ ನಡೆಯುವ ಸ್ಥಳಗಳಲ್ಲಿ ನಿಗಧಿತ ದಿನಾಂಕದAದು ಬೆಳಗ್ಗೆ 8 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ವಿಭಾಗ ಮಟ್ಟದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಜೊತೆಗೆ ಇಲಾಖೆಯಿಂದ ನೀಡಲಾಗುವ ಅಕ್ರಿಡೇಷನ್ ಫಾರಂ ಅನ್ನು ನೋಂದಣಿಯ ಸಮಯದಲ್ಲಿ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.