logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಸುಭಾಸ್ ನಗರದ ಕುರ್ಕಾಲು ತೋಟದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆಯತಪ್ಪಿ ಬಾವಿಯೊಳಗೆ ಬಿದ್ದು ವ್ಯಕ್ತಿ‌ ಸಾವು

ಟ್ರೆಂಡಿಂಗ್
share whatsappshare facebookshare telegram
4 Sept 2022
post image

ಉಡುಪಿ:

ಮನೆಯಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆಯತಪ್ಪಿ ಬಾವಿಯೊಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಭಾಸ್ ನಗರದ ಕುರ್ಕಾಲು ತೋಟ ಎಂಬಲ್ಲಿ‌ ಸೆ.3ರಂದು ಸಂಜೆ ನಡೆದಿದೆ. ಮೃತರನ್ನು ಉಡುಪಿಯ ಸಾಯಿ ರಾಧಾ ಅಪಾರ್ಟ್‌ಮೆಂಟ್‌ ನಿವಾಸಿ 72 ವರ್ಷದ ವಿಠಲ ಅಮಿನ್‌ ಎಂದು ಗುರುತಿಸಲಾಗಿದೆ. ಇವರು ಪತ್ನಿ ಶಶಿ ಅವರೊಂದಿಗೆ ಸಾಯಿರಾಧ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, 6 ತಿಂಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿ ಬಲ ಕೈ ಹಾಗೂ ಬಲ ಕಾಲಿನ ಸ್ವಾಧೀನ ಕಳೆದುಕೊಂಡಿದ್ದರು. ಕುರ್ಕಾಲು ತೋಟದಲ್ಲಿರುವ ಅಣ್ಣನ ಮನೆಗೆ ವಾರಕ್ಕೊಮ್ಮೆ ಹೋಗಿ ಬರುತ್ತಿದ್ದರು. ನಿನ್ನೆ ಸಂಜೆ ಕೂಡ ಪತ್ನಿಯೊಂದಿಗೆ ಮನೆಗೆ ಬಂದಿದ್ದು, ಮನೆಯ ಅಂಗಳದಲ್ಲಿ ವಾಕಿಂಗ್‌ ಮಾಡುತ್ತಿದ್ದರು. ಈ ವೇಳೆ ಆಯತಪ್ಪಿ ಅಂಗಳದಲ್ಲಿರುವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಅಣ್ಣನ ಮಗ ಸಚಿನ್ ಕುಮಾರ್ ನೀಡಿರುವ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.