logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಪ್ರತ್ಯೇಕ ಪ್ರಕರಣ - ನಾಲ್ವರ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
17 Oct 2024
post image

ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ:

ಕುಂದಾಪುರ: ತಾಯಿಯ ಅನಾರೋಗ್ಯದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಂದಾವರ ಗ್ರಾಮದ ನವೀನ ಡಿಸೋಜ(42) ಎಂಬವರು ಅ.15ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ಆತ್ಮಹತ್ಯೆ:

ಕೋಟ: ಮಗನ ಅಕಸ್ಮಿಕ ಸಾವಿನಿಂದ ಖಿನ್ನತೆಗೆ ಒಳಗಾಗಿ ಅ.14ರಂದು ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆವರ್ಸೆ ಗ್ರಾಮದ ಕಿರಾಡಿ ಬೆಳ್ಳ(65) ಎಂಬವರು ಅ.15ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನದ ಹಿಂಬದಿಯ ಕೆರೆಗೆ ಹಾರಿ ಆತ್ಮಹತ್ಯೆ:

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಬಸ್ರೂರು ಗ್ರಾಮದ ಕಲ್ಯಾಣಿ(82) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಅ.15ರಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆ ಸಮೀಪದ ವೆಂಕಟರಮಣ ದೇವಸ್ಥಾನದ ಹಿಂಬದಿಯ ದೇವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಯಕ್ತಿಕ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ:

ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಮಲ್ಲಾರು ಗ್ರಾಮದ ನಾಗವೇಣಿ ಎಂಬವರ ಮಗ ಸುನೀಲ್ (32) ಎಂಬವರು ಅ.15ರಂದು ಮಧ್ಯಾಹ್ನ ಮನೆಯ ಹಾಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.