



ಉಡುಪಿ: ಬೀಡಿನಗುಡ್ಡೆ ಹೀರೆನ್ ಬಾರಿನ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿಯೊರ್ವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೂತ್ರಬಾಧೆ ತಿರಿಸಲು ಹೋದಾಗ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ರುದ್ರಪ್ಪ (50) ಎಂದು ಎನ್ನಲಾಗಿದೆ. ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮಾಡಿರುವರು. ಸಂಬಂಧಿಕರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಘಟನೆಯ ಬಗ್ಗೆ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.