logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
24 Dec 2021
post image

ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದಿಂದ ಯುವತಿ ನಾಪತ್ತೆ ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಿಂದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ. ಮೂಡನಿಡಂಬೂರು ಗ್ರಾಮದ ನಿವಾಸಿ ಸಹನಾ (24) ನಾಪತ್ತೆಯಾಗಿರುವ ಯುವತಿ. ಈಕೆ ಡಿಸೆಂಬರ್ 23 ರಂದು ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.