


ಉಡುಪಿ, :ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜೂನ್ 15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರ, ಜೂ. 16 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮತ್ತು ಜೂ. 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬAಧಿಸಿದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷö್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ, ಸಾರ್ವಜನಿಕ ನೌಕರನು ತನ್ನ ಸೇವಾವಧಿಯಲ್ಲಿ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿಯನ್ನು ಹೊಂದಿದ್ದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.