logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಇಬ್ಬರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
17 Oct 2022
post image

ಉಡುಪಿ:

ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಅಂಬಾಗಿಲು ಜಂಕ್ಷನ್ ನಲ್ಲಿ ನಡೆದಿದೆ. ಕೊಂಬಗುಡ್ಡೆಯ ಸುಭಾನ್ ಖಾದರ್ ಅವರು ಸ್ಕೂಟರ್ ನಲ್ಲಿ ಅಂಬಾಗಿಲು ಮೀನು ಮಾರ್ಕೆಟ್ ಎದುರುಗಡೆ ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಆರೋಪಿ ಬ್ರಿಜೇಶ್ ಎಂಬಾತನು ತನ್ನ ಬೈಕ್ ಹಿಂಬದಿಯಲ್ಲಿ ಧನುಷಾ ಎಂಬಾಕೆಯನ್ನು ಕುರಿಸಿಕೊಂಡು, ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸುಭಾನ್ ಖಾದರ್ ಅವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಸುಭಾನ್ ಅವರು ಗಾಯಗೊಂಡಿದ್ದಾರೆ. ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಹ ಸವಾರೆ ಧನುಷಾ ಅವರಿಗೂ ತಲೆಗೆ ಗಾಯವಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..‌

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.