


ಉಡುಪಿ: ಉಡುಪಿ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಇದೇ ಡಿ.16ರಿಂದ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ.
ಉಡುಪಿ ಅಂಬಲಪಾಡಿಯ ವಸಂತ ಮಂಟಪದಲ್ಲಿ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
1.2 ಕಿ.ಮೀ ಉದ್ದದ ಮೇಲ್ಸೇತುವೆ ಜತೆ ಅಂಡರ್ಪಾಸ್ ಕಾಮಗಾರಿ ನಡೆಯಲಿದೆ. 18 ತಿಂಗಳ ಪ್ರಾಜೆಕ್ಟ್ ಇದಾಗಿದ್ದು, 23.53 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. ಕಾರ್ಲಾ ಕನ್ಸ್ ಕನ್ಟ್ರಕ್ಷನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.
ಸ್ಥಳೀಯರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಯೋಜನೆಯ ಮಾಹಿತಿ ಪಡೆದುಕೊಂಡರು. ಈ ನಡುವೆ ಶೀಘ್ರ ಕಾಮಗಾರಿ ಆರಂಭಿಸಲೇಬೇಕು ಎಂಬ ಒತ್ತಾಯ ಕೇಳಿಬಂತು. ಕೆಲವು ಉದ್ಯಮಿಗಳ ಒತ್ತಡಕ್ಕೆ ಮಣಿದು ಕಾಮಗಾರಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು.
ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಸೋಮವಾರದಂದು ಕಾಮಗಾರಿ ಆರಂಭಗೊಳ್ಳಲೇ ಬೇಕು. ನಾಳೆಯೆ ಕಾಮಗಾರಿಯ ನೀಲಿ ನಕಾಶೆಯನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಅದಕ್ಕೆ ಅವರು ಒಪ್ಪಿಗೆ ಸೂಚಿಸಿದರು. ಉಡುಪಿ ಶಾಸಕರು ಈ ಸಂದರ್ಭದಲ್ಲಿ ಇದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.