



ಉಡುಪಿ, :): ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಜಿಲ್ಲೆಯಲ್ಲಿ 2020-21 ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುತ್ತಿದ್ದು, ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ, ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟç ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ, ರಾಷ್ಟಿçÃಯ ಖೇಲೋ ಇಂಡಿಯ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮತ್ತು ರಾಷ್ಟಿçÃಯ ಶಾಲಾ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ 2021-22 ನೇ ಸಾಲಿನ ಮಾಧ್ಯಮಿಕ ಮತ್ತು ಪ್ರೌಢಶಾಲಾ ಅರ್ಹ ವಿದ್ಯಾರ್ಥಿ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ. 30 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ದೂರವಾಣಿ ಸಂಖ್ಯೆ: 0820-2521324, ಮೊ. ಸಂಖ್ಯೆ: 9480886467 ಅನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.